LATEST NEWS
ಸ್ಕೂಟರ್ ಗೆ ಲಾರಿ ಡಿಕ್ಕಿ ಸ್ಥಳದಲ್ಲೆ ಮಹಿಳೆ ಸಾವು

ಸ್ಕೂಟರ್ ಗೆ ಲಾರಿ ಡಿಕ್ಕಿ ಸ್ಥಳದಲ್ಲೆ ಮಹಿಳೆ ಸಾವು
ಮಂಗಳೂರು ನ.26: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ಬಳಿ ನಡೆದಿದೆ.
ಮೃತರನ್ನು ಪಂಜಿ ಮೊಗರು ನಿವಾಸಿ ಪ್ರಿಯಾ (43) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಬ್ಯೂಟಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಿಯಾ ತಮ್ಮ ಸ್ಕೂಟರ್ ನಲ್ಲಿ ಕೆಪಿಟಿಯಿಂದ ಮನೆ ಕಡೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ.ಡಿಕ್ಕಿ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅಪಘಾತ ನಡೆಸಿದ ಚಾಲಕ ಲಾರಿ ಜೊತೆ ಪರಾರಿಯಾಗಿದ್ದು, ಪೊಲೀಸರು ಚಾಲಕನನ್ನು ಕುದುರೆಮುಖದಲ್ಲಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
