Connect with us

BANTWAL

ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು; ಯುವತಿ ಸಾವು ಮತ್ತೊಬ್ಬಳು ಗಂಭೀರ

ಬಂಟ್ವಾಳ ಜೂನ್ 24: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನ ಹಿಂಬದಿ ಸವಾರೆ ಸಾವನಪ್ಪಿರುವ ಘಟನೆ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದಿದೆ.  ಮೃತಳನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಉದ್ಯೋಗಿಯಾಗಿದ್ದರು.


ಈ ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಹರ್ಷಿತಾ ಎಂದು ಗುರುತಿಸಲಾಗಿದೆ.


ಇವರಿಬ್ಬರೂ ಬಿ.ಸಿ.ರೋಡ್ ನಿಂದ ಬೆಂಜನಪದವು ರಸ್ತೆಯ ಮೂಲಕ ಕಡೆಗೋಳಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಜನಪದವು ಎಂಬಲ್ಲಿ ಎದುರಿನಿಂದ ಬಂದ ಕಾರು ಇವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನ ವೇಗದ ಚಲಾವಣೆಯೇ ಅಪಘಾತಕ್ಕೆ ಕಾರಣವಾಗಿದ್ದು, ಚಾಲಕ ಪರಾರಿಯಾಗಿದ್ದಾನೆ.