Connect with us

DAKSHINA KANNADA

ಸ್ಕೂಟರ್ ಗೆ ಬುಲೆಟ್ ಟ್ಯಾಂಕರ್ ಡಿಕ್ಕಿ – ಬಾಲಕ ಸಾವು

ಉಪ್ಪಿನಂಗಡಿ ಸೆಪ್ಟೆಂಬರ್ 06: ಬುಲೆಟ್ ಟ್ಯಾಂಕರ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಬೈಪಾಸ್ ಬಳಿ ನಡೆದಿದೆ.


ಬಾಲಕ ತನ್ನ ತಾಯಿ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿದ್ದು ಬಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ ಟ್ಯಾಂಕರ್ ಹರಿದು ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಬಾಲಕನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *