LATEST NEWS
ಸ್ಕೂಟರ್ ಗೆ ಲಾರಿ ಡಿಕ್ಕಿ ಸವಾರ ಸಾವು…!!
ಮಂಗಳೂರು ಎಪ್ರಿಲ್ 25: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಜಪ್ಪಿನಮೊಗರು ಬಳಿಯ ನಡುಮೊಗರು ಎಂಬಲ್ಲಿ ನಡೆದಿದೆ.
ಮೃತ ಸವಾರನನ್ನು ರೊನಾಲ್ಡ್ (59) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೊಣಾಜೆಯಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಲಾರಿ ಮೊದಲು ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಇದರಿಂದ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
You must be logged in to post a comment Login