Connect with us

DAKSHINA KANNADA

ಸ್ಕೂಟರ್ ಗೆ ಪಿಕಪ್ ವಾಹನ ಡಿಕ್ಕಿ ಓರ್ವ ಸಾವು – ಮತ್ತೊಬ್ಬ ಗಂಭೀರ

ವಿಟ್ಲ ಎಪ್ರಿಲ್ 14: ಪಿಕಪ್ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲದ ಸುರಿಬೈಲು ತಿರುವಿನಲ್ಲಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಮೂಲದ ದ್ವಿಚಕ್ರವಾಹನ ಸವಾರ ಸಂತೋಷ್‌ (35) ಎಂದು ಗುರುತಿಸಲಾಗಿದ್ದು, ಸಹ ಸವಾರ ರಂಜಿತ್‌ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಚಲಿಸುತ್ತಿದ್ದ ಪಿಕ್‌ಅಪ್‌ ವಾಹನದ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ವತ್ರೆಗೆ ದಾಖಲಿಸಲಾಗಿದೆ. ಸಂತೋಷ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.