ಹಿಂದುತ್ವಕ್ಕಾಗಿ ಹಪತಪಿಸುತ್ತಿರುವ ಕಾಂಗ್ರೆಸ್ – ಎಸ್ ಡಿಪಿಐ

ಮಂಗಳೂರು ಮಾರ್ಚ್ 9: ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕಾಂಗ್ರೇಸ್ ಸಮಾವೇಶದಲ್ಲಿ ಕೇಂದ್ರದಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಕಾಂಗ್ರೇಸ್ ಮುಖಂಡ ಸಿ.ಎಂ ಇಬ್ರಾಹಿಂ ಹೇಳಿಕೆಯನ್ನು ಎಸ್ ಡಿಪಿಐ ತಿವ್ರವಾಗಿ ಖಂಡಿಸಿದೆ.

ಕಳೆದ 26 ವರುಷಗಳಿಂದ ಬಾಬರಿ ಮಸ್ಜಿದ್ ನ ಪುನರ್ ನಿರ್ಮಾಣಕ್ಕಾಗಿ ಕಾಯುತ್ತಿರುವ ಈ ದೇಶದ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೇಸ್ ಪಕ್ಷ ಮತ್ತೊಮ್ಮೆ ಘೋರ ಅನ್ಯಾಯ ಮಾಡಿದ್ದಾರೆ ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಬರಿ ಮಸ್ಜಿದ್ ಅದೇ ಸ್ಥಳದಲ್ಲಿ ಪುನರ್ ನಿರ್ಮಿಸುತ್ತೇವೆ ಎಂದು 1992 ರಲ್ಲಿ ಭರವಸೆ ನೀಡಿದ ಕಾಂಗ್ರೆಸ್ ಭರವಸೆಯನ್ನು ಈಡೇರಿಸದೆ ಇದೀಗ ರಾಮ ಮಂದಿರ ನಿರ್ಮಿಸುವ ಬಗ್ಗೆ ಭರವಸೆಯ ಮಾತುಗಳನ್ನಾಡಿ ಮೃದು ಹಿಂದುತ್ವವನ್ನು ತಾಳುತ್ತಿರುವುದು ಇವರ ಜ್ಯಾತ್ಯಾತೀತ ನಿಲುವುಗಳು ನಾಶ ಹೊಂದಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಗೆಯಾಗಿದೆ ಮತ್ತು ರಾಮ ಮಂದಿರ ನಿರ್ಮಿಸುವ ವಿಚಾರದಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಕೂಡ ಪೈಪೋಟಿ ನಡೆಸುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಚುನಾವಣೆ ಹತ್ತಿರ ಬಂದಂತೆ ಮುಸ್ಲಿಂ ಸಮುದಾಯವನ್ನು ಕಡೆಗಣಿಸಿ, ಧಾರ್ಮಿಕ ಭಾವನೆಗಳಿಗೆ ಚ್ಯುತಿ ಬರುವಂತಹ ರೀತಿಯಲ್ಲಿ ಮಾತನಾಡುವುದನ್ನು ಸಹಿಸಲು ಜಿಲ್ಲೆಯ ಪ್ರಜ್ಞಾವಂತ ನಾಗರಿಕರಿಗೆ ಸಾಧ್ಯವಿಲ್ಲ. ಆದುದರಿಂದ ಕಾಂಗ್ರೆಸ್ ಪಕ್ಷದ ನಾಯಕರು ಬಾಬರಿ ಮಸ್ಜಿದ್ ಪುನರ್ ನಿರ್ಮಾಣದ ಬಗ್ಗೆ ಮತ್ತು ಜಾತ್ಯಾತೀತ ನಿಲುವಿನ ವಿಚಾರದಲ್ಲಿ ಸ್ಪಷ್ಟೀಕರಣ ನೀಡಬೇಕೆಂದು ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ.