ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಎಸ್ ಡಿಪಿಐ ಅಭ್ಯರ್ಥಿ ಇಲ್ಯಾಸ್ ಮೊಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

ಮಂಗಳೂರು ಮಾರ್ಚ್ 25: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಎಸ್ ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್ ಮೊಹಮ್ಮದ್ ತುಂಬೆ ಅವರು ಇಂದು ನಾಮಪತ್ರ ಸಲ್ಲಿಸಿದರು.

ನಗರದ ಹಂಪನಕಟ್ಟೆಯಿಂದ ಸಾವಿರಾರು ಎಸ್ ಡಿಪಿಐ ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಲಾಯಿತು. ನಂತರ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ ಡಿಪಿಐ ನ ರಾಜ್ಯ, ಜಿಲ್ಲಾ ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.

ನಾಮಪತ್ರ ಸಂದರ್ಭ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.