LATEST NEWS
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಆಯ್ಕೆ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಆಯ್ಕೆ
ಬಂಟ್ವಾಳ ಮಾರ್ಚ್ 9: ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ವಿವಿಧ ಪಕ್ಷಗಳು ಅಭ್ಯರ್ಥಿಗಳು ಆಯ್ಕೆಯಲ್ಲಿ ವಿಮರ್ಶೆ ನಡೆಯುತ್ತಿದೆ, ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವೆಂದು ಗುರುತಿಸಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎಸ್ ಡಿಪಿಐ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯ ಆದೇಶದಂತೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿಯಾದ ರಿಯಾಝ್ ಫರಂಗಿಪೇಟೆ ಯವರ ಹೆಸರನ್ನು ಅಂತಿಮಗೊಳಿಸಿದೆ.
You must be logged in to post a comment Login