Connect with us

    BANTWAL

    SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ, ಮತದಾನದ ಕುರಿತು ಜಾಗ್ರತಿ ಮೂಡಿಸಲು ನಿರ್ಧಾರ

    ಮಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು.

    SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ ವಿರೋಧಿ ಶಕ್ತಿಗಳನ್ನು ಸೋಲಿಸಲು ಪಕ್ಷವು ನಿರ್ಣಾಯಕ ಪಾತ್ರ ವಹಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಗರಿಷ್ಠ ಮಟ್ಟದ ಮತದಾನ ಆಗುವ ನಿಟ್ಟಿನಲ್ಲಿ ಎಲ್ಲಾ ಮತದಾರರನ್ನು ತನ್ನ ಹಕ್ಕು ಚಲಾವಣೆಯಲ್ಲಿ ಭಾಗವಹಿಸಲು ಪಕ್ಷದ ನಾಯಕರು, ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಕಾರ್ಯಗಳನ್ನು ಮಾಡಬೇಕೆಂದು ಸಭೆ ನಿರ್ಣಯಿಸಿತು, ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ನಡೆಸಿ ಪಕ್ಷದ ಕೇಡರು ಗಳಿಗೆ ಈ ವಿಚಾರದಲ್ಲಿ ಮನವರಿಕೆ ಮಾಡಿ ಕೊಡಲು ಸಭೆ ತೀರ್ಮಾನಿಸಿದೆ

    ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡೂರ್, ಜಮಾಲ್ ಜೋಕಟ್ಟೆ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಮೂಸಬ್ಬ ತುಂಬೆ, ವಿಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply