ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪತ್ತೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ SDPI ಪ್ರತಿಭಟನೆ

ಮಂಗಳೂರು ಜನವರಿ 23: ಮಂಗಳೂರು ವಿಮಾನನಿಲ್ದಾಣ ಸಜೀವ ಬಾಂಬ್ ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ SDPI ಪ್ರತಿಭಟನೆ ನಡೆಸಿತು.

ಮಂಗಳೂರಿನ ಹಂಪನಕಟ್ಟೆ ಬಳಿ ಸೇರಿದ ಪ್ರತಿಭಟನಾಕಾರರು ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣದ ಹಿಂದೆ ಬೇರೆಯವರ ಕೈವಾಡ ಇರುವ ಶಂಕೆ ಇದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಬಾಂಬ್ ಪ್ರಕರಣ ಆರೋಪಿ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ರಾಜ್ಯ ಗೃಹ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ SDPI ಕಾರ್ಯಕರ್ತರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

Facebook Comments

comments