LATEST NEWS
ಕಬಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ತಡೆ

ಪುತ್ತೂರು ಅಗಸ್ಟ್ 15: ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಪೋಟೋ ಆಳವಡಿಸುವಂತೆ ಒತ್ತಾಯಿಸಿ ಎಸ್ ಡಿ.ಪಿ.ಐ ಕಾರ್ಯರ್ತರು ಪ್ರತಿಭಟನೆ ನಡೆಸಿದ ಘಟನೆ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಕಬಕ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ಸ್ವಾತಂತ್ರ್ಯ ರಥಕ್ಕೆ ತಡೆ ಒಡ್ಡಿದ್ದಾರೆ.

ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ರವರು ಸಮಾಧಾನ ಮಾಡಿದರು ಕೇಳಿಸಿಕೊಳ್ಳದ ತಂಡ ವೀರ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.
ಈ ಬಗ್ಗೆ ಮಾಹಿತಿ ಅರಿತ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ರವರ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.