Connect with us

LATEST NEWS

ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಿಸಲು ಸುಪ್ರೀಂ ಮೆಟ್ಟಿಲೇರಲು ಸಿದ್ಧ – ಎಸ್ ಡಿಪಿಐ

ಉಳ್ಳಾಲ ನವೆಂಬರ್ 20: ಉಳ್ಳಾಲವನ್ನು ಪಾಕಿಸ್ತಾನ್ಕಕ್ಕೆ ಹೋಲಿಸಿದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿಯಾದರೂ ಎಫ್ ಐಆರ್ ದಾಖಲಿಸುವುದು ಖಚಿತ ಎಂದು ಎಸ್ ಡಿಪಿಐ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.


ಉಳ್ಳಾಲ ಪ್ರದೇಶವನ್ನು ಪಾಕಿಸ್ತಾನ ಎಂದು ಹೇಳಿ ಅವಮಾನಗೊಳಿಸಿದ ದೇಶವಿರೋಧಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಾಸ್ತಿಕಟ್ಟೆ ಜಂಕ್ಷನ್ ನಲ್ಲಿ ಗುರುವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಕಲಿ ಜಾತ್ಯಾತೀತ ಮುಖವಾಡದವರ ಪ್ರೋತ್ಸಾಹದಿಂದ ಕಲ್ಲಡ್ಕ ಭಟ್ ನಿರಂತರವಾಗಿ ಅಶಾಂತಿ ಸೃಷ್ಟಿಸುವ ಮಾತುಗಳನ್ನಾಡುತ್ತಿದ್ದಾರೆ. ಉಳ್ಳಾಲ ಪಾಕಿಸ್ತಾನ ಎಂದ ಭಟ್ ವಿರುದ್ಧವೇ ಸ್ವಕ್ಷೇತ್ರದ ಶಾಸಕರಿಗೆ ಪೊಲೀಸ್ ಇಲಾಖೆಯಲ್ಲಿ ದೂರು ನೀಡಲು ಅಸಾಧ್ಯವಾಗಿದೆ. ಜಾತ್ಯಾತೀತ ಮುಖವಾಡ ತೋರಿಸಿಕೊಂಡು ಕೋಮುವಾದವನ್ನು ಶಾಸಕರು ವಿರೋಧಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.