BELTHANGADI
ಪಾಕ್ ಪರ ಘೋಷಣೆ ನೈಜ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಎಸ್ ಡಿಪಿಐ ನಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬೆಳ್ತಂಗಡಿ ಜನವರಿ 6: ಡಿಸೆಂಬರ್ 30 ರಂದು ಉಜಿರೆಯಲ್ಲಿ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ವಿಚಾರವಾಗಿ ಬಂಧಿತರಾಗಿರುವ ಎಸ್ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಪೊಲೀಸ್ ಠಾಣೆ ಸಮೀಪ ಪ್ರತಿಭಟನೆ ನಡೆಸಿದರು.
ಪೊಲೀಸ್ ಠಾಣೆ ಮುತ್ತಿಗೆ ಬಗ್ಗೆ ಮೊದಲೆ ಮಾಹಿತಿ ಇದ್ದ ಕಾರಣ ಪೊಲೀಸರು ಠಾಣೆಯ ಗೇಟಿನ ಬಳಿ ಸೂಕ್ತ ಬಂದೊಬಸ್ತು ಮಾಡಿದ್ದರು. ಈ ಸಂದರ್ಭ ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸದೆ, ಅಮಾಯಕರನ್ನು ಬಂಧಿಸಲಾಗಿದೆ.

ರಾಜಕೀಯಕ್ಕೆ ಒತ್ತಡ ಬಳಸಿ ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ನಮಗೆ ಉತ್ತರ ಬೇಕು. ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ. ಮೇಲಾಧಿಕಾರಿಗಳು ಬರುವವವರೆಗೂ ನಾವು ಕದಲುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದರು. ಆರ್ ಎಸ್ ಎಸ್, ಹಿಂದೂ ಸಂಘಟನೆಗಳು, ಶಾಸಕ ಹರೀಶ್ ಪೂಂಜ, ಸಂಸದ ನಳಿನ್ ಕುಮಾರ್ ಕಟಿಲ್ ವಿರುದ್ಧ ಘೋಷಣೆ ಕೂಗಿದರು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.