DAKSHINA KANNADA
ಪುತ್ತೂರು – ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

ಪುತ್ತೂರು ಫೆಬ್ರವರಿ 14: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ, ಮಸೂದೆಯ ಪ್ರತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಯಿತು.
ವಕ್ಫ್ ತಿದ್ದುಪಡಿ ಮಸೂದೆಯು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾವಾಗಿದ್ದು ಈ ಮಸೂದೆಯನ್ನು ದೇಶದ ಜಾತ್ಯಾತೀತರು ಒಪ್ಪಲ್ಲ, ವಕ್ಫ್ ಆಸ್ತಿಯು ಮುಸಲ್ಮಾನ ಸಮುದಾಯದ ಹಕ್ಕಾಗಿದ್ದು ಇದರಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಸಲ್ಲದು, ಇದರ ವಿರುಧ್ದ ಇನ್ನೂ ತೀವ್ರತೆಯ ಹೋರಾಟ ಮುಂದುವರೆಯಲಿದೆ ಎಂಬ ಸಂದೇಶ ಸಾರಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಹಮೀದ್ ಸಾಲ್ಮಾರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಶ್ರಫ್ ಬಾವು, ಕಾರ್ಯದರ್ಶಿ ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು. ಕ್ಷೇತ್ರ ಸಮಿತಿ ಸದಸ್ಯರಾದ ರಹೀಂ ಪುತ್ತೂರು ಸ್ವಾಗತಿಸಿ ವಂದಿಸಿದರು.