Connect with us

    LATEST NEWS

    ಜೀವರಕ್ಷಕರಿಂದ ಕಡಲತೀರದಲ್ಲಿ ಸಂಭವಿಸುವ ಅಹಿತಕರ ಘಟನೆ ತಡೆಯಲು ಸಾಧ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

    ಉಡುಪಿ, ಡಿಸೆಂಬರ್ 16 : ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.


    ಅವರು ಇಂದು ಮಲ್ಪೆಯ ಕಡಲತೀರದಲ್ಲಿ ಜೀವ ರಕ್ಷಕ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು. ಕಡಲ ಸೊಬಗನ್ನು ಸವಿಯಲು ಹೊರಗಿನಿಂದ ಬರುವ ಜನರಿಗೆ ಸಮುದ್ರ ಪ್ರದೇಶದ ಆಳ, ಅಲೆಗಳ ಹೊಡೆತಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಅರಿವಿಲ್ಲದೇ ಅನಾಹುತಗಳು ಆಗುವ ಸಾಧ್ಯತೆಗಳಿದ್ದು, ಇವುಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ನುರಿತ ಹಾಗೂ ಪರಿಣಿತ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದು ಒಂದು ಅಭಿನಂದನೀಯ ಕಾರ್ಯ ಎಂದರು.


    ದೇಶದಲ್ಲಿಯೇ ಮಲ್ಪೆ ಬೀಚ್ ಅತ್ಯಾಕರ್ಷಣೀಯವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದಿನೇ ದಿನೇ ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಜೀವರಕ್ಷಕರನ್ನು ಮಲ್ಪೆ, ಮರವಂತೆ, ಕಾಪು, ತ್ರಾಸಿ, ಬೀಚ್‌ಗಳಲ್ಲಿ ನೇಮಿಸಲಾಗುತ್ತಿದೆ ಎಂದ ಅವರು, ಈಗಾಗಲೇ ಮೊದಲ ಹಂತದಲ್ಲಿ 17 ಜನ ಜೀವರಕ್ಷಕರಿಗೆ ತರಬೇತಿಯನ್ನು ನೀಡಲಾಗಿದ್ದು, ತಮ್ಮ ಕಾರ್ಯಕ್ಕೆ ಶೀಘ್ರದಲ್ಲಿಯೇ ನಿಯೋಜನೆಗೊಳ್ಳಲಿದ್ದಾರೆ ಎಂದರು.


    ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದ ಅವರು, ಪ್ರವಾಸಿ ತಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *