ಏರ್ ಸ್ಟ್ರೈಕ್ – ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಸ್ಟೇಜ್ 1 ಅಲರ್ಟ್ ಘೋಷಣೆ

ಕಾರವಾರ ಫೆಬ್ರವರಿ 26: ಭಾರತೀಯ ವಾಯು ಸೇನೆಯ ಮಿರಾಜ್ 2000 ಯುದ್ದ ವಿಮಾನಗಳು ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ನಾಶ ಮಾಡಿದ ಹಿನ್ನಲೆಯಲ್ಲಿ ಮಿಲಿಟರಿ ಬೇಸ್ ಗಳಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಕರ್ನಾಟಕದ ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಸ್ಟೇಜ್ 1 ಅಲರ್ಟ್ ಘೋಷಿಸಲಾಗಿದೆ.

ಕಾರವಾರದ ಸೀಬರ್ಡ್ ನೌಕಾನೆಲೆಯ ಚೆಂಡಿಯಾ ಗೇಟ್ ನಲ್ಲಿ ಭದ್ರತಾ ಕಾರ್ಯದಲ್ಲಿ ಸಿಬ್ಬಂದಿಗಳು ನಿರತರಾಗಿದ್ದಾರೆ. ಹಲವು ಗೇಟ್ ಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಪಾಕಿಸ್ತಾನದ ಬಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆಯು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸೀಬರ್ಡ್ ನೌಕಾನೆಲೆಯಲ್ಲಿ ಸ್ಟೇಜ್ 1 ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ನೌಕಾನೆಲೆಯ ಮುಖ್ಯಸ್ಥ ಶಾಂತನು ಶರ್ಮಾ, ‘ನೌಕಾನೆಲೆಯಲ್ಲಿ ಭದ್ರತೆಯನ್ನು ಎಂದಿಗಿಂತ ಹೆಚ್ಚಿಸಲಾಗಿದೆ. ಹಲವು ಗೇಟ್‌ಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಅಗತ್ಯ ಕಾರ್ಯಗಳಿಗೆ ಬರುವವರನ್ನು ತೀವ್ರ ತಪಾಸಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

Facebook Comments

comments