LATEST NEWS
ಮಂಗಳೂರು ಎರಡನೇ ಬಲಿ ಪಡೆದ ಕೊರೊನಾ

ಮಂಗಳೂರು ಎರಡನೇ ಬಲಿ ಪಡೆದ ಕೊರೊನಾ
ಮಂಗಳೂರು ಎಪ್ರಿಲ್ 23: ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ 75 ವರ್ಷದ ವೃದ್ದೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯ ಸೊಸೆ ಎಪ್ರಿಲ್ 20 ರಂದು ಕೊರೊನಾ ಸೊಂಕಿನಿಂದ ಮೃತರಾಗಿದ್ದರು, ಇಂದು ಮೃತರಾದ ವೃದ್ಧೆ ಮಹಿಳೆ ಏಪ್ರಿಲ್ 18 ರಿಂದ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಂತರ ಇವರಿಗೂ ಕೊರೊನಾ ಸೊಂಕಿನ ಲಕ್ಷಣಗಳು ಕಾಣಿಸಿದ ಹಿನ್ನಲೆ ಕೊವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಕೊರೊನಾ ಇರುವುದು ದೃಢಪಟ್ಟ ಹಿನ್ನಲೆ ಅವರನ್ನು ಮಂಗಳೂರಿನ ವೆನ್ಲಾಕ್ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರನ್ನು ಕೋವಿಡ್-19 ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ದ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ 18 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣಕನ್ನಡದಲ್ಲಿ ಇಂದು ಎರಡನೇ ಬಲಿಯಾಗಿದೆ.