ಮೂಡುಬಿದಿರೆ, ಏಪ್ರಿಲ್ 09: ವೈಬ್ರೆಂಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ನಡಿ ಕಾರ್ಯನಿರ್ವಹಿಸುತ್ತಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದ್ದು, ಇದು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಈ ಸಾಧನೆಯೊಂದಿಗೆ ನ್ಯೂ ವೈಬ್ರೆಂಟ್ ಕಾಲೇಜು ರಾಜ್ಯದ ಪ್ರಮುಖ ಪಿಯು ಕಾಲೇಜುಗಳ ಪೈಕಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಸಾಧನೆ ಮಾಡಿದ ವಿದ್ಯಾರ್ಥಿ ಧನುಷ್ ಗುತ್ತಿ 598 ಅಂಕಗಳನ್ನು ಗಳಿಸಿದ್ದು, “ನನಗೆ ಉತ್ತಮ ಅಂಕಗಳನ್ನು ಪಡೆಯಲು ಕಾಲೇಜಿನ ಗೈಡೆಡ್ ಸ್ಟಡಿ ಹಾಗೂ ಉಪನ್ಯಾಸಕರ ಮಾರ್ಗದರ್ಶನ ಬಹಳ ಸಹಾಯವಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೋರ್ವ ಪ್ರತಿಭಾವಂತ ವಿದ್ಯಾರ್ಥಿನಿ ಸರಸ್ವತಿ ಎಂ.ಎಸ್ 593 ಅಂಕಗಳನ್ನು ಪಡೆದು, “ಉಪನ್ಯಾಸಕರ ನಿರಂತರ ಮಾರ್ಗದರ್ಶನ ಮತ್ತು ನಿರ್ದೇಶಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು,” ಎಂದು ಹೇಳಿದರು. ಅದೇ ರೀತಿ ತಸ್ನೀಮ್ ಎಸ್.ಎಂ 592 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದು, “ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ಶಿಕ್ಷಕರ ಬೆಂಬಲದಿಂದ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಯಿತು,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ನಿರ್ದೇಶಕರು, ಬೋಧಕ ಹಾಗೂ ಬೋಧಕೇತರ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ, ಭವಿಷ್ಯದಲ್ಲೂ ಇನ್ನಷ್ಟು ಯಶಸ್ಸು ಗಳಿಸುವಂತೆ ಹಾರೈಸಿದರು.