ಏಪ್ರಿಲ್ 15 ರಂದು ದ್ವಿತೀಯ ಪಿಯುಸಿ ರಿಸಲ್ಟ್

ಬೆಂಗಳೂರು ಎಪ್ರಿಲ್ 12: ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 15 ಸೋಮವಾರ ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 11 ಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಫಲಿತಾಂಶ ಪ್ರಕಟಿಸುವುದರ ಜೊತೆಗೆ ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ಗೆ www.pue.kar.nic.in ಫಲಿತಾಂಶ ಅಪ್‌ಲೋಡ್‌ ಮಾಡಲಾಗುವುದು ಎಂದು ಹೇಳಿದರು.

ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಮಾರ್ಚ್‌ 1 ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಿತು. ಮಾರ್ಚ್‌ 23 ರಿಂದ ಮೌಲ್ಯಮಾಪನ ಆರಂಭವಾಗಿ ಕಳೆದ ವಾರಾಂತ್ಯದಲ್ಲಿ ಮುಗಿದಿತ್ತು.

ಈ ಬಾರಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ನಂತರ ಅಂಕಗಳನ್ನು ಆನ್‌ಲೈನ್ ಮೂಲಕ ಸರ್ವರ್‌ಗೆ ಅಪ್‌ಲೋಡ್ ಮಾಡಿದ್ದರಿಂದ ಬೇಗನೆ ಫಲಿತಾಂಶ ನೀಡಲು ಸಾಧ್ಯವಾಗಿದೆ. ಸಾಮಾನ್ಯವಾಗಿ ಸಿಇಟಿ ಪರೀಕ್ಷೆಯ ಬಳಿಕ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿತ್ತು.