LATEST NEWS
ಮಂಗಳೂರು – ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣು….!!

ಮಂಗಳೂರು ಸೆಪ್ಟೆಂಬರ್ 11: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಜೈ ಚರ್ಚೆ ರಸ್ತೆ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
ಬಿಜೈನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ಮಗಳು ನೆಲೆಸಿದ್ದು, ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇನ್ನು ವಿದ್ಯಾರ್ಥಿನಿ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.
