Connect with us

KARNATAKA

ಮೇ 20 ರಿಂದ ದ್ವಿತೀಯ ಪಿಯಸಿ ತರಗತಿ ಆರಂಭ

ಮೇ 20 ರಿಂದ ದ್ವಿತೀಯ ಪಿಯಸಿ ತರಗತಿ ಆರಂಭ

ಮಂಗಳೂರು ಮಾರ್ಚ್ 16: ಸರಕಾರಿ ಪದವಿಪೂರ್ವ ಉಪನ್ಯಾಸಕರ ಧರಣಿ ಬೆದರಿಕೆಗೆ ಹೆದರಿದ ರಾಜ್ಯ ಸರಕಾರ ದ್ವಿತೀಯ ಪಿಯಸಿ ತರಗತಿಗಳನ್ನು ಮೇ 20 ರಂದು ಆರಂಭಿಸಲು ಒಪ್ಪಿಗೆ ಸೂಚಿಸಿದೆ.

ರಾಜ್ಯ ಸರಕಾರ ದ್ವಿತೀಯ ಪಿಯುಸಿ ತರಗತಿಗಳನ್ನು ಮೇ ಮೊದಲ ವಾರದಲ್ಲಿ ಪ್ರಾರಂಭಿಸುವ ಬಗ್ಗೆ ಈ ಮೊದಲು ಆದೇಶ ಹೊರಡಿಸಿತ್ತು. ಆದೇಶದ ವಿರುದ್ದ ಸರಕಾರಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿ ಧರಣಿ ಬೆದರಿಕೆ ಒಡ್ಡಿದ್ದರು.

ಬೇಸಿಗೆ ರಜೆ ಕಡಿತ ರದ್ದು ಮಾಡುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 21ರಿಂದ ಸರ್ಕಾರಿ ಪದವಿಪೂರ್ವ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕಾರ ಮತ್ತು ಅನಿರ್ದಿಷ್ಟ ಅಹೋರಾತ್ರಿ ಧರಣಿ ಮತ್ತು ನಡೆಸಲು ಉದ್ದೇಶಿಸಿದ್ದರು. ಈ ಹಿನ್ನಲೆಯಲ್ಲಿ ದ್ವಿತೀಯ ಪಿಯು ತರಗತಿಗಳನ್ನು ಮೇ ಮೊದಲ ವಾರದ ಬದಲು ಮೇ 20ರಿಂದ ಆರಂಭಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದಾರೆ.

ಉಪನ್ಯಾಸಕರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಮುಖ್ಯಮಂತ್ರಿ ಮೇ 6ರ ಬದಲಿಗೆ ಮೇ 20ರಿಂದ ತರಗತಿಗಳನ್ನು ಆರಂಭಿಸಲು ಒಪ್ಪಿಗೆ ನೀಡಿದ್ದು, ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.

Facebook Comments

comments