DAKSHINA KANNADA
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ ದಕ್ಷಿಣಕನ್ನಡಕ್ಕೆ ಎರಡನೇ ಸ್ಥಾನ

ಬೆಂಗಳೂರು ಎಪ್ರಿಲ್ 08: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದರೆ ದಕ್ಷಿಣಕನ್ನಡ ಜಿಲ್ಲೆಯ ಎರಡನೇ ಸ್ಥಾನ ಪಡೆದಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈಗಾಗಲೇ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಉಡುಪಿ ಜಿಲ್ಲೆ ಶೇ 93.90 ಫಲಿತಾಂಶ ಗಳಿಸಿದ್ದು, ಮೊದಲ ಸ್ಥಾನ ಪಡೆದಿದೆ. ಯಾದಗಿರಿ ಶೇ 48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. ಇವರು 600 ಕ್ಕೆ 599 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಮೊದಲ ರಾಂಕ್ ಪಡೆದಿದ್ದಾರೆ.
1 Comment