Connect with us

    DAKSHINA KANNADA

    24 ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪಾಸಾದ ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ

    ಸುಳ್ಯ ಎಪ್ರಿಲ್ 23: ಬರೋಬ್ಬರಿ 24 ವರ್ಷಗಳ ಬಳಿಕ ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.


    ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ. ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾ ವಣೆಯಲ್ಲಿ ಸದಸ್ಯೆ ಯಾಗಿ ಆಯ್ಕೆಯಾಗಿ 2 ವರ್ಷ ಗಳಿಂದ ಪಾಣಾಜೆ ಗ್ರಾ.ಪಂ. ಅಧ್ಯಕ್ಷೆಯಾಗಿದ್ದಾರೆ.

    ಬೆಳ್ತಂಗಡಿಯ ಕೊಯ್ಯೂರು ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಗಿರುವ ಪಾಣಾಜೆಯ ಬಾಲಕೃಷ್ಣ ಬೇರಿಕೆ ಅವರ ಮಾರ್ಗದರ್ಶನ ದೊಂದಿಗೆ 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಬರೆದು ಶೇ. 54 ಅಂಕ ಗಳಿಸಿದ್ದರು. ಈ ಬಾರಿ ದ್ವಿತೀಯ ಪಿಯುಸಿಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯ ನಿರೀಕ್ಷೆ ಇರಲಿಲ್ಲ. ಬಾಲ್ಯದಲ್ಲಿ ಸಿಗದಿರುವುದನ್ನು ಈಗ ಪಡೆದಿದ್ದೇನೆ. ಮುಂದೆ ಪದವಿ ಪಡೆಯುವ ಗುರಿ ಹೊಂದಿ
    ದ್ದೇನೆ ಎನ್ನುತ್ತಾರೆ ಭಾರತಿ ಭಟ್‌.

    Share Information
    Advertisement
    Click to comment

    You must be logged in to post a comment Login

    Leave a Reply