Connect with us

    KARNATAKA

    ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್

    ಬೆಂಗಳೂರು, ಮೇ 04: ದಿನದಿನಕ್ಕೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

    ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆಯ ನಂತರ ಮಾತನಾಡಿದ ಸಚಿವರು ಪಿಯುಸಿ ಪರೀಕ್ಷೆ ಪ್ರಾರಂಭಕ್ಕೆ 15-20 ದಿನಗಳ ಮುನ್ನ ದಿನಾಂಕ ಪ್ರಕಟಿಸುತ್ತೇವೆ. ಪರೀಕ್ಷೆ ಮುಂದೂಡಿಕೆಯಾದ ಕಾರಣ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ವಿಚಲಿತರಾಗದೆ ಅಭ್ಯಾಸ ಮುಂದುವರಿಸಿ ಎಂದು ಹೇಳಿದರು.

    ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೆ ಮುನ್ನ ಬ್ರಿಡ್ಜ್ ಕೋರ್ಸ್ ನಡೆಸಲಾಗುತ್ತದೆ. ಅಲ್ಲದೆ ಇಲಾಖೆಯ ಯೂಟ್ಯೂಬ್ ಚಾನಲ್ ಮೂಲಕ ಇದೇ ಕೂಡಲೇ ಬ್ರಿಡ್ಜ್ ಕೋರ್ಸ್ ಲಭ್ಯವಾಗುವಂತೆ ಮಾಡಲಾಗುವುದು ಎಂದರು. ಪರೀಕ್ಷೆ ಮುಂದೂಡಿದ ಕಾರಣದಿಂದ ವಿದ್ಯಾರ್ಥಿಗಳೊಡನೆ ಸತತ ಸಂಪರ್ಕದಲ್ಲಿದ್ದು ಉಪನ್ಯಾಸಕರು ವರ್ಕ್ ಫ್ರಮ್ ಹೋಮ್ ಮಾಡುವಂತೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.

    ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯಗಳು ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು. ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿ ಸರ್ಕಾರ ಇದಾಗಲೇ ಆದೇಶ ಹೊರಡಿಸಿತ್ತು.

    Share Information
    Advertisement
    Click to comment

    Leave a Reply

    Your email address will not be published. Required fields are marked *