LATEST NEWS
ವಿಧಾನಸಭಾ ಚುನಾವಣೆ ಮತಎಣಿಕೆ – ಜಿಲ್ಲೆಯಲ್ಲಿ ಎರಡು ದಿನ ನಿಷೇಧಾಜ್ಞೆ
ವಿಧಾನಸಭಾ ಚುನಾವಣೆ ಮತಎಣಿಕೆ – ಜಿಲ್ಲೆಯಲ್ಲಿ ಎರಡು ದಿನ ನಿಷೇಧಾಜ್ಞೆ
ಮಂಗಳೂರು ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸರ್ವ ಸಿದ್ದತೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 58 ಅಭ್ಯರ್ಥಿ ಭವಿಷ್ಯ ನಾಳೆ ನಿರ್ಧಾರ ವಾಗಲಿದೆ.
ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ನಗರದ ಹೊರವಲಯದ ಮಹಾತ್ಮಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆ ಹಾಗು ಪದವಿ ಪೂರ್ವ ಕಾಲೇಜಿ ನಲ್ಲಿ ನಡೆಯಲಿದೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ , ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಭಂಗ ಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಇಂದು ಮದ್ಯರಾತ್ರಿ ಯಿಂದ ಮೇ 16 ರಾತ್ರಿ 12 ಗಂಟೆವರೆಗೆ ವಿಜಯೋತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ ಅವರು ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಹೇಳಿದರು.
ಮೇ 14 ರ ಮಧ್ಯರಾತ್ರಿ ಯಿಂದ 16 ರ ಮಧ್ಯರಾತ್ರಿ ವರೆಗೆ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿ ಮಾಡಲಾಗಿದ್ದು ಜಿಲ್ಲೆಯಲ್ಲಿ ಇಂದು ಮಧ್ಯ ರಾತ್ರಿಯಿಂದ ನಾಳೆ ಮಧ್ಯರಾತ್ರಿ ತನಕ ಮದ್ಯಮಾರಾಟ ನಿಷೇಧ ಮಾಡಲಾಗಿದೆ ಎಂದು ಅವರು ಹೇಳಿದರು. ಮತ ಎಣಿಕೆ ಕಾರ್ಯ ಕ್ರಮ ಬದ್ಧವಾಗಿದ್ದು ಗೊಂದಲಕ್ಕೆ ಯಾವುದೇ ಅವಕಾಶ ಆಗದಂತೆ ಎಚ್ಚರ ವಹಿಸಲಾಗಿದ್ದು, ಮತಯಂತ್ರ ಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂ ಗಳಿಗೆ ಮೂರು ಹಂತದ ಭಧ್ರತೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.