LATEST NEWS
ಟಿಪ್ಪು ಜಯಂತಿಗಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ
ಟಿಪ್ಪು ಜಯಂತಿಗಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ
ಮಂಗಳೂರು ನವೆಂಬರ್ 9: ಟಿಪ್ಪುಜಯಂತಿ ಆಚರಣೆಗೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಹಲವು ಅಡೆತಡೆಗಳ ನಡುವೆ ಕೊನೆಗೂ ಮಂಗಳೂರಿನಲ್ಲಿ ನಡೆಯುವ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಿದ್ದತೆಗಳನ್ನು ಪೂರ್ಣಗೊಳಿಸಿದೆ. ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾಡಳಿತ ಟಿಪ್ಪು ಜಯಂತಿ ಆಚರಣೆ ನಡೆಸಲು ಸಿದ್ದತೆ ನಡೆಸಿದೆ.
ಈಗಾಗಲೇ ಬಿಜೆಪಿ ಟಿಪ್ಪು ಜಯಂತಿ ವಿರೋಧ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರತಿಭಟನೆ ನಡೆಯುವುದು ಸಾಧ್ಯತೆ ಇದ್ದು, ಈ ಹಿನ್ನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿಗೆ ನಗರ ಪೊಲಿಸ್ ಆಯುಕ್ತರು ಆದೇಶಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಳೆ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.
ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆ ಮೆರವಣಿಗೆ, ಬ್ಯಾನರ್ಸ್, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆಗಳನ್ನು ಕೂಗದಂತೆ ಹಾಗೂ ಗುಂಪುಗುಂಪಾಗಿ ಸೇರಿ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.