Connect with us

LATEST NEWS

ಇಂದು ಸಂಜೆಯಿಂದ ನಾಳೆ ಬೆಳಿಗ್ಗೆಯವರೆಗೆ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು ಡಿಸೆಂಬರ್ 31: ಕೊರೊನಾ ಸೊಂಕು ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದಾದ್ಯಂತ ಇಂದು ಸಂಜೆ 6 ರಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್‌ ಆಯುಕ್ತ ವಿಕಾಸ್‌‌ ಕುಮಾರ್‌ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.


ಇನ್ನು ಹೊಸ ವರ್ಷಚರಣೆಯ ನೆಪದಲ್ಲಿ ಐದಕ್ಕಿಂದ ಹೆಚ್ಚು ಜನ ಸೇರುವುದು, ಸಾರ್ವಜನಿಕ ಸ್ಥಳ, ರಸ್ತೆ, ಬೀಚ್‌‌‌ ಹಾಗೂ ಮೈದಾನಗಳಲ್ಲಿ ಹೊಸ ವರ್ಷಾಚರಣೆ, ಜನ ಸೇರಿಸಿ ಹೊಸ ವರ್ಷಆಚರಣೆ ಮಾಡುವುದಕ್ಕೆ ಸಂಪೂರ್ಣ ನಿರ್ಭಂಧ ಹೇರಲಾಗಿದೆ. ವಸತಿ ಸಮುಚ್ಚಯ, ಖಾಸಗಿ ಕ್ಲಬ್‌‌‌ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ. ಹೊಟೇಲ್‌‌‌‌, ಬಾರ್‌, ಪಬ್‌‌, ಮಾಲ್‌ಗಳಲ್ಲಿ ಡಿಜೆ, ಮ್ಯೂಸಿಕಲ್‌‌‌ ನೈಟ್‌‌ಗಳಿಗೆ ನಿಬಂಧ, ಇವುಗಳಲ್ಲಿ ಪ್ರತಿನಿತ್ಯದ ವ್ಯವಹಾರಕಷ್ಟೇ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.


ಈ ನಡುವೆ ಈಗಾಗಲೇ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *