DAKSHINA KANNADA
ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ
ಪುತ್ತೂರು ಡಿಸೆಂಬರ್ 15: ನಿನ್ನೆ ಉಪ್ಪಿನಂಗಡಿ ಠಾಣೆಯ ಎದುರು ಪಿಎಫ್ಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭ ನಡೆದ ಘರ್ಷಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಉಪ್ಪಿನಂಗಡಿಯಲ್ಲಿ ನಡೆದ ತಲವಾರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಪಿಎಫ್ಐ ಸಂಘಟನೆ ನಿನ್ನೆ ಬೆಳಿಗ್ಗೆಯಿಂದ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು.
ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಸಂಜೆಯಾಗುತ್ತಿದ್ದಂತೆ ಘರ್ಷಣೆಗೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಈ ಸಂದರ್ಭ ಪಿಎಫ್ಐ ಕಾರ್ಯಕರ್ತರು ಹಾಗೂ ಕೆಲ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿತ್ತು.
ಇದರ ಹಿನ್ನಲೆಯಲ್ಲಿ ಇನ್ನಷ್ಟು ಪ್ರತಿಭಟನೆಗೆ ಕಾರಣವಾಗಬಹುದು ಎಂಬ ಹಿನ್ನಲೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ರ ಅನ್ವಯ ಇಂದಿನಿಂದ ಡಿ.17 ರ ಮಧ್ಯರಾತ್ರಿಯವರೆಗೆ ನಿಷೇದಾಜ್ಞೆ ವಿಧಿಸಿ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.