Connect with us

    LATEST NEWS

    ಭಾರತ್ ಬಂದ್ ವೇಳೆ ಗಲಭೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೆಕ್ಷನ್ 144

    ಭಾರತ್ ಬಂದ್ ವೇಳೆ ಗಲಭೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೆಕ್ಷನ್ 144

    ಉಡುಪಿ ಸೆಪ್ಟೆಂಬರ್ 10: ತೈಲ ಬೆಲೆ ಏರಿಕೆ ಹಿನ್ನಲೆಯಲ್ಲಿ ಕಾಂಗ್ರೇಸ್ ನಡೆಸುತ್ತಿರುವ ಭಾರತ್ ಬಂದ್ ಉಡುಪಿಯಲ್ಲಿ ಘರ್ಷಣೆಗೆ ತಿರುಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಇಂದು ನಡೆದ ಭಾರತ್ ಬಂದ್ ವೇಳೆ ಉಡುಪಿಯಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿತ್ತು. ಗಲಾಟೆ ತಪ್ಪಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಕೂಡ ನಡೆದಿದೆ. ಈ ಹಿನ್ನಲೆಯಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ತಕ್ಷಣದಿಂದ ಸೆಕ್ಷನ್ 144 ಜಾರಿ ಮಾಡಿ ಆದೇಶಿಸಿದ್ದಾರೆ.

    ಉಡುಪಿ ಯಲ್ಲಿ ನಾಳೆ ಮುಂಜಾನೆ 6 ಗಂಟೆವರೆಗೂ ನಿಷೇಧಾಜ್ಞೆ ಮುಂದುವರೆಯಲಿದ್ದು, ಈ ಸಂದರ್ಭದಲ್ಲಿ ವಿಜಯೋತ್ಸವ, ಕರಾಳೋತ್ಸವ ಆಚರಿಸದಂತೆ, ಅಲ್ಲದೆ ಆಯುಧಗಳನ್ನು ಕೊಂಡೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಳಿಗ್ಗೆ ನಡೆದ ಕಾಂಗ್ರೇಸ್ ಬಿಜೆಪಿ ಕಾರ್ಯಕರ್ತರ ಹೊಡೆದಾಟ ಹಿನ್ನೆಲೆ ನಗರದಾದ್ಯಂತ ಬಿಗಿಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *