LATEST NEWS
ಜಿಲ್ಲೆಯಲ್ಲಿ ನಾಳೆಯಿಂದ ಮಾರ್ಚ್ 31 ರವರೆಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಜಿಲ್ಲೆಯಲ್ಲಿ ನಾಳೆಯಿಂದ ಮಾರ್ಚ್ 31 ರವರೆಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಮಂಗಳೂರು ಮಾರ್ಚ್ 23: ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ರಾಜ್ಯ/ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಅದೇಶದಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ದಿನಾಂಕ 22.03.2020 ರ ರಾತ್ರಿ 09.00 ಗಂಟೆಯಿಂದ ದಿನಾಂಕ 31.03.2020 ರ ಮಧ್ಯರಾತ್ರಿ 12.00 ಗಂಟೆಯವರೆಗೆ ದಂಡಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಅನ್ವಯ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿರುತ್ತದೆ. ಅದರಂತೆ ಈ ಕಳಗಿನ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಹಕರಿಸಲು ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
1, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗಡಿಭಾಗಗಳಲ್ಲಿ
a) ಕೇರಳ ರಾಜ್ಯಕ್ಕೆ ಹೊಂದಿಕೊಂಡಂತೆ ಸಾರಡ್ಕ, ಬೆರಿಪದವು, ಆನೇಕಲ್, ನೆಲ್ಲಿಕಟ್ಟೆ, ಸಾಲೆತ್ತೂರು,ಗಾಳಿಮುಖ, ಸುಳ್ಯಪದವು, ಕಾಟುಕುಕ್ಕೆ, ಮಾರೂರು, ಮಂಡೆಕೋಲು, ಕನ್ನಡಿಕೋಲು, ಕಲ್ಲಹಳ್ಳಿ ಸೇರಿದಂತೆ ಒಟ್ಟು 12 ಅಂತರ್ ರಾಜ್ಯ ಚೆಕ್ ಪೋಸ್ಟ್ಗಳು
b) ಉಡುಪಿ ಜಿಲ್ಲೆಗೆ ಹೊಂದಿಕೊಂಡಂತೆ ನಾರಾವಿ, ಚಿಕ್ಕಮಗಳೂರು ಜಿಲ್ಲೆಗೆ ಹೊಂದಿಕೊಂಡಂತೆ ಚಾರ್ಮಾಡಿ, ಹಾಸನ ಜಿಲ್ಲೆಗೆ ಹೊಂದಿಕೊಂಡಂತೆ ಗುಂಡ್ಯ ಮತ್ತು ಕೊಡಗು ಜಿಲ್ಲೆಗೆ ಹೊಂದಿಕೊಂಡಂತೆ ಕಲ್ಲುಗುಂಡಿ ಯಲ್ಲಿ ಒಟ್ಟು 04 ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಯಾವುದೇ ಇತರ ರಾಜ್ಯ/ಜಿಲ್ಲೆ/ತಾಲ್ಲೂಕುಗಳಿಗೆ ಪ್ರಯಾಣಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
2, ಜನರು ಗುಂಪಾಗಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಯಾವುದೇ ಸನ್ನಿವೇಶಗಳಲ್ಲೂ ಗುಂಪಾಗಿ ಸೇರುವಂತಿಲ್ಲ.
4, ಸಾರ್ವಜನಿಕರು ತುರ್ತು ಮತ್ತು ಅತೀ ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ಯಾವುದೇ ಕಾರ್ಯಗಳಿಗೆ ವಿನಾಕಾರಣ ತಮ್ಮ ವಾಸಸ್ಥಾನದಿಂದ ಹೊರಬರುವುದು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಅವಶ್ಯಕ ಸೇವಗಳಾದ ಅಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ.ಮೀನು, ಮಾಂಸ, ಹಣ್ಣಿನ ಮಾರುಕಟ್ಟೆ ಮತ್ತು ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ಮಾತ್ರ ಬೆಳಿಗ್ಗೆ 06 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ತೆರೆಯಲು ಅವಕಾಶವಿರುತ್ತದೆ. ಅನಂತರ ಕಡ್ಡಾಯವಾಗಿ ಮುಚ್ಚತಕ್ಕದ್ದು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ತುರ್ತು ಅವಶ್ಯಕ ಸೇವೆಗಳಾದ ಸರಕಾರಿ ಸೇವಾ ಕಛೇರಿಗಳು ಹಾಗೂ ಆಸ್ಪತ್ರೆ, ಮೆಡಿಕಲ್ ಕ್ಲಿನಿಕ್, ಮೆಡಿಕಲ್ ಶಾಪ್, ಮೆಡಿಕಲ್ ಲ್ಯಾಬೊರೇಟರಿಗಳಿಗೆ ನಿರ್ಬಂಧನೆಯಿಂದ ವಿನಾಯಿತಿ ನೀಡಲಾಗಿರುತ್ತದೆ.
5. ಸಾರ್ವಜನಿಕರು ತಮ್ಮ ಮನೆಗಳಲ್ಲೂ ಕೂಡಾ ಜನ ಸೇರುವಂತಹ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗಿದೆ,
6, ಸಾಮಾಜಿಕ ಅಂತರವನ್ನು ಪಾಲಿಸುವ ದೃಷ್ಠಿಯಲ್ಲಿ ಜನಜಂಗುಳಿ ಸೇರುವಂತಹ ಯಾವುದೇ ಸಭೆ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಬಿರ, ವಸ್ತುಪ್ರದರ್ಶನ, ಕ್ರೀಡಾ ಚಟುವಟಿಕೆ/ಪಂದ್ಯಾಟ ಹಾಗೂ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ/ಜಾತ್ರಗಳನ್ನು ನಿಷೇಧಿಸಲಾಗಿದೆ,
7, ಅವಶ್ಯಕ ಸೇವೆಗಳು ಮತ್ತು ವಸ್ತುಗಳು, ಅಹಾರ, ವೈದ್ಯಕೀಯ ಉಪಕರಣಗಳು, ಔಷಧ, ಇಂಧನ ಹಾಗೂ ಕೃಷಿ ಉತ್ಪನ್ನಗಳ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಕೈಗಾರಿಕೆಗಳು/ಕಾರ್ಖಾನೆಗಳ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸತಕ್ಕದ್ದು
8. ಯಾವುದೇ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
9, ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಸಂಸ್ಥೆಗಳ ಬಸ್ ಸಂಚಾರವನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದ್ದು ಅಂತರ್ ರಾಜ್ಯ ಮತ್ತು ಅಂತರ್ಜೆಲ್ಲಾ ಸಾರಿಗೆ ಸೇವೆಗಳು ಲಭ್ಯವಿರುವುದಿಲ್ಲ.
10. ಅಟೋ ಹೊರತುಪಡಿಸಿ OLA, UBAR, Taxis ಸೇರಿದಂತೆ ಯಾವುದೇ ಸಾರಿಗೆ ಬಳಸತಕ್ಕದಲ್ಲ. ತಪ್ಪಿದಲ್ಲಿ ಅಂತಹವರ ವಿರುದ್ದ ಮೋಟಾರು ಕಾಯ್ದೆಯ ಅನ್ವಯ ಕಾನೂನು ಕ್ರಮಕೈಗೊಳ್ಳಲಾಗುತ್ತದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮೇಲಿನ ಕಠಿನ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಸೂಚನೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.