ಮಂಗಳೂರು ಮಹಾನಗರಪಾಲಿಕೆ ಮತ ಎಣಿಕೆ ಹಿನ್ನಲೆ ನಾಳೆ ರೊಸಾರಿಯೋ ಶಾಲೆಯ ಸುತ್ತಮುತ್ತ ನಿಷೇಧಾಜ್ಞೆ

ಮಂಗಳೂರು ನವೆಂಬರ್ 13: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದೆ. ಈ ಹಿನ್ನೆಲೆ ನಾಳೆ ಮತ ಎಣಿಕಾ ಕೇಂದ್ರದ ಸುತ್ತಮುತ್ತ ಐಪಿಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮಾಡಿ ಆದೇಶಿಸಲಾಗಿದೆ.

ಮಂಗಳೂರು ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕಮಂಗಳೂರು ನಗರದ ಪಾಂಡೇಶ್ವರದ ರೊಸಾರಿಯೋ ಶಾಲೆಯಲ್ಲಿ ನಡೆಯಲಿದೆ. ಈ ಹಿನ್ನಲೆ ರೋಸಾರಿಯೋ ಶಾಲೆ ಸುತ್ತಮುತ್ತ ನಿಷೇಧಾಜ್ಞೆ ಐಪಿಸಿ 144 ರ ಅನ್ವಯ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷಾ ಆದೇಶಿಸಿದ್ದಾರೆ.

ನಿಷೇಧಾಜ್ಞೆಯು ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಜಾರಿಯಲ್ಲಿದ್ದು, ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಸಭೆ ಸಮಾರಂಭ, ವಿಜಯೋತ್ಸವ, ಮೆರವಣಿಗೆ, ಹಾಗೂ ಮಾರಕಾಸ್ತ್ರಗಳನ್ನು ಒಯ್ಯದಂತೆ ನಿರ್ಬಂಧಿಸಲಾಗಿದೆ.

Facebook Comments

comments