LATEST NEWS
ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಜಾರಿ

ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಜಾರಿ
ಮಂಗಳೂರು ಜನವರಿ 3 : ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಲವು ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ರಂತೆ ನಿರ್ಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಜನವರಿ 3 ರಾತ್ರಿ 10 ಗಂಟೆಯಿಂದ ಜನವರಿ 4 ರ ರಾತ್ರಿ 10 ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಜಾರಿಯಲ್ಲಿರಲಿದ್ದು, ಯಾವುದೇ ರೀತಿಯಲ್ಲಿ ಮೆರವಣಿಗೆ ಪ್ರತಿಭಟನೆ ಜಾಥಾ, ಧರಣಿ, ಮುಷ್ಕರ ರಾಸ್ತಾ ರೋಕೋ ಸೇರಿದಂತೆ ಮುತ್ತಿಗೆಯಂತಹ ಕಾರ್ಯಕ್ರಮಗಳನ್ನು ನಿರ್ಬಂಧಿಸಿ ಕಲಂ 35 ರನ್ವಯ ನಿರ್ಬಂಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಟಿ. ಆರ್ ಸುರೇಶ್ ಆದೇಶ ಹೊರಡಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.