LATEST NEWS
ಬಂಟ್ವಾಳ ರಹೀಂ ಕೊ**ಲೆ ಪ್ರಕರಣ -ಮಂಗಳೂರು ಕಮೀಷನರೆಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು ಮೇ 27: ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.
ಬಂಟ್ವಾಳದಲ್ಲಿ ರಹೀಂ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬಂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅದುದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ : 27-05-2025 ರಂದು ಸಂಜೆ 06-00 ಗಂಟೆಯಿಂದ 30-05-2025 ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
