LATEST NEWS
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭದ್ರತಾ ಸಿದ್ದತೆ ಪರಿಶೀಲನೆ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭದ್ರತಾ ಸಿದ್ದತೆ ಪರಿಶೀಲನೆ
ಉಡುಪಿ, ಮಾರ್ಚ್ 20: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತೆ ಹಾಗೂ ಇತರ ಸಿದ್ದತೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಪರ ಮೆರವಣಿಗೆ ಅಥವಾ ನಾಮ ಪತ್ರ ಸಲ್ಲಿಸಲು ನಿರ್ಭಂದ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಪರಿಶೀಲನೆ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯೊಂದಿಗೆ ಉಪಸ್ಥಿತರಿದ್ದರು.
