Connect with us

  KARNATAKA

  ಬಾತ್​ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಮಾಡಿ ಸಿಕ್ಕಿಬಿದ್ದ ಸೆಕ್ಯೂರಿಟಿ ಗಾರ್ಡ್ ಗೆ ಬಿತ್ತು ಗೂಸಾ..!

  ಕಲಬುರಗಿ : ಬಾತ್ ರೂಮ್​​ನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿ ಅಪಾರ್ಟ್ ಮೆಂಟ್ ಗಾರ್ಡ್ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ಯ ನಗರದ ರಾಮ ಮಂದಿರ ವೃತ್ತದ ಬಳಿ ನಡೆದಿದೆ.

  ಅಪಾರ್ಟ್​​ಮೆಂಟ್​​​ನಲ್ಲಿ ಬಾಡಿಗೆಯಿದ್ದ ಮಹಿಳೆಯ ವಿಡಿಯೋವನ್ನು ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ಎಂಬಾತ ರೇಕಾರ್ಡ್ ಮಾಡುತ್ತಿರುವುದನ್ನು ಮಹಿಳೆ ಗಮನಿದ್ದಾಳೆ, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಪಾರ್ಟ್​​ಮೆಂಟ್​ಗೆ ಆಗಮಿಸಿದ ಮಹಿಳೆಯ ಗಂಡ ಸೆಕ್ಯುರಿಟಿ ಗಾರ್ಡ್​​ ನನ್ನು ಹಿಡಿದು ಥಳಿಸಿದ್ದಾರೆ. ಜೊತೆಗೆ ಸೇರಿದ ಅಪಾರ್ಟ್​​ಮೆಂಟ್​ ನಿವಾಸಿಗಳು ಅಂಡರ್ ಗ್ರೌಂಡ್​​ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್​​ ನನ್ನು ಕಟ್ಟಿ ಹಾಕಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply