ನಾಳೆ ಮಂಗಳೂರಿಗೆ ಮೋದಿ – ನಗರದಾದ್ಯಂದ ಬಿಗಿ ಪೊಲೀಸ್ ಬಂದೋಬಸ್ತ್

ಮಂಗಳೂರು ಎಪ್ರಿಲ್ 12: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಚುನಾವಣಾ ಪ್ರಚಾರಕ್ಕಾಗಿ ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನ ದಲ್ಲಿ ಬೃಹತ್ ಸಭೆ ನಡೆಸಲಿದ್ದಾರೆ.

ನಾಳೆ ಮಧ್ಯಾಹ್ನ 2.45 ಕ್ಕೆ ಮುಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಪ್ರಧಾನ ಮೋದಿ, ಸಂಜೆ 4 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ..ಮೋದಿ ರಾಲಿಯನ್ನು ಐತಿಹಾಸಿಕವಾಗಿ ನಡೆಸಲು ಬಿಜೆಪಿ ಪ್ಲಾನ್ ಮಾಡಿದ್ದು ದಾಖಲೆ ಸಂಖ್ಯೆಯಲ್ಲಿ ಜನ ಸೇರಿಸಲು ಸಿದ್ದತೆ ಮಾಡಿದೆ.

ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 5SP, 10DYSP, 36PI, 67 PSI, 147ASI, 1207 PC ಸೇರಿದಂತೆ ಒಟ್ಟು 1472ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ‌.
92 HI, 5KSRP, 19CAR,ಮತ್ತು 2CRPF ತುಕುಡಿಗಳ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಜೊತೆಗೆ 4ASP, 1BDS ತಂಡ ಕಾರ್ಯಕ್ರಮ ನಡೆಯುವ ಸ್ಥಳ ವಿಮಾನ ನಿಲ್ದಾಣ, ಹಾಗೂ ಪ್ರಧಾನಿ ಸಂಚರಿಸುವ ಸ್ಥಳದ ತಪಾಸಣೆ ಗೆ ನೇಮಿಸಲಾಗಿದೆ‌. ನಾಳೆ ಮೋದಿ ಆಗಮನದಿಂದ ಕರಾವಳಿ ಕೇಸರಿ ಪಾಳಯದಲ್ಲಿ ಸಂಚಲನ ಮೂಡಿದ್ದು, ಚುನಾವಣಾ ರಣೋತ್ಸಾಹ ಇಮ್ಮಡಿಯಾಗಿದೆ.

Facebook Comments

comments