Connect with us

DAKSHINA KANNADA

ಪಾಕಿಸ್ತಾನ ಪರ ಘೋಷಣೆ, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಕಾಂಗ್ರೇಸ್ ಮುಖಂಡರ ವಿರುದ್ಧ ರಾಜದ್ರೋಹದ ದೂರು

ಪಾಕಿಸ್ತಾನ ಪರ ಘೋಷಣೆ, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಕಾಂಗ್ರೇಸ್ ಮುಖಂಡರ ವಿರುದ್ಧ ರಾಜದ್ರೋಹದ ದೂರು

ಮಂಗಳೂರು, ಮೇ 21: ಕಾಂಗ್ರೇಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮೇ 19 ರಂದು ಕಾಂಗ್ರೇಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದರು.

ಈ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಕಾಂಗ್ರೇಸ್ ಮುಖಂಡರ ವಿರುದ್ಧ ರಾಜದ್ರೋಹದ ದೂರು ನೀಡಿದ್ದಾರೆ.

ಮಂಗಳೂರಿನ ಶಕ್ತಿನಗರ ನಿವಾಸಿ ಜಯಪ್ರಶಾಂತ್ ಎಂಬವರು ಮಂಗಳೂರು ಪೋಲೀಸ್ ಕಮಿಷನರ್ ಗೆ ದೂರು ನೀಡಿದ್ದು, ಮಾಜಿ ಶಾಸಕ ಜೆ.ಆರ್.ಲೋಬೋ, ಸಮರ್ಥ್ ಭಟ್, ಮಾಜಿ ಕಾರ್ಪೋರೇಟರ್ ಪದ್ಮನಾಭ ಅಮಿನ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್ ರಾಮ್ ದಾಸ್ ಪ್ರಭು ವಿರುದ್ಧ ದೂರು ನೀಡಲಾಗಿದೆ.

ಒರ್ವ ದೇಶಪ್ರೇಮಿಯಾಗಿ , ಕಾನೂನು ಪರಿಪಾಲಕನಾಗಿ ಕಾಂಗ್ರೇಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಡೆಸಿದ ಕೃತ್ಯದಿಂದ ತನಗೆ ನೋವಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ಭಾರತದ ಸಾರ್ವಭೌಮತೆಗೂ ಧಕ್ಕೆಯಾಗಿದ್ದು, ದೂರಿನಲ್ಲಿ ದಾಖಲಿಸಿ ವ್ಯಕ್ತಿಗಳ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.