KARNATAKA
ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರ ಸಾವು
ಬೆಳಗಾವಿ ನವೆಂಬರ್ 26: ಕಿತವಾಡ ಫಾಲ್ಸ್ ನಲ್ಲಿ ಸೆಲ್ಪಿ ತೆಗೆಯಲು ಹೋದ ನಾಲ್ವರು ಯುವತಿಯರು ನೀರುಪಾಲಾದ ಘಟನೆ ನಡೆದಿದೆ.
ಮೃತರನ್ನು ಉಜ್ವಲ್ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್ಶೀಯಾ ಹಾಸ್ ಪಟೇಲ್(20), ಝಟ್ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20) ಹಾಗೂ ತಸ್ಮಿಯಾ(20) ಸಾವನ್ನಪ್ಪಿದ್ದಾರೆ.
ಬೆಳಗಾವಿಯಿಂದ ಕಿತವಾಡ ಫಾಲ್ಸ್ಗೆ 40 ಯುವತಿಯರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸೆಲ್ಫಿ ತಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ.
You must be logged in to post a comment Login