Connect with us

    LATEST NEWS

    ಆಂಧ್ರದಿಂದ ಮಂಗಳೂರಿಗೆ ಗಾಂಜಾ ಸಾಗಿಸಿ ಮಾರಾಟ: ಆರೋಪಿ ನಿಶಾಂತ್ ಶೆಟ್ಟಿ ಅರೆಸ್ಟ್..!

    ಮಂಗಳೂರು :  ಆಂಧ್ರಪ್ರದೇಶದಿಂದ  ಮಂಗಳೂರಿಗೆ  ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು  6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

    ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ. ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.  ಆರೋಪಿಯಿಂದ ಗೂಡ್ಸ್ ಟೆಂಪೋ. 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆ ಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ. ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈ ಬಸವರಾಜಪ್ಪ ಮತ್ತು ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *