FILM
ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಇನ್ನಿಲ್ಲ

ಬೆಂಗಳೂರು ಡಿಸೆಂಬರ್ 04: ಅಪಘಾತದಿಂದ ಮೆದುಳಿಗೆ ಹಾನಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ಸಾವನಪ್ಪಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಶಿವರಾಂ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಈ ಸಂದರ್ಭ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಅವರು, ಮನೆಯಲ್ಲಿ ಪೂಜೆ ಸಲ್ಲಿಸುವ ಸಂದರ್ಭ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಅವರು ಕೋಮಾಗೆ ಜಾರಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದರು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬದಿದೆ.

ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಶಿವರಾಂ ಅವರು ನಟಿಸಿದ್ದರು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು.