Connect with us

    FILM

    ಹಿರಿಯ ರಂಗಕರ್ಮಿ ನಟ ಜಿ.ಕೆ ಗೋವಿಂದ ರಾವ್ ನಿಧನ

    ಬೆಂಗಳೂರು ಅಕ್ಟೋಬರ್ 15: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಇಂದು ನಿಧನರಾಗಿದ್ದಾರೆ.


    ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇಂದು ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಜಿ.ಕೆ. ಗೋವಿಂದ ರಾವ್ ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ
    ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.

    ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply