LATEST NEWS
ಉಡುಪಿ – ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಾಘಾತದಿಂದ ನಿಧನ
ಉಡುಪಿ ನವೆಂಬರ್ 10: ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿತ್ತು. ಈ ಹಿನ್ನಲೆ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.
1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.
You must be logged in to post a comment Login