Connect with us

LATEST NEWS

ಹಿರಿಯ ಪತ್ರಕರ್ತ ಅಮ್ಮುಂಜ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!

ಪುತ್ತೂರು ಅಗಸ್ಟ್ 9:  ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.

ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿಕೊಂಡು ಚಿರಪರಿಚಿತರಾಗಿದ್ದ ನಾರಾಯಣ ಅವರು ಸರಳ, ಸಜ್ಜನಿಕೆಯೊಂದಿಗೆ ಎಲ್ಲರ ಜೊತ ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದರು.

Facebook Comments

comments