Connect with us

    FILM

    ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನ

    ಬೆಂಗಳೂರು ಎಪ್ರಿಲ್ 16: ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ಅವರು ನಟಿಸಿ ಫೇಮಸ್ ಆಗಿದ್ದರು.


    ದ್ವಾರಕೀಶ್ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ‘ಮಮತೆಯ ಬಂಧನ’ ಅವರ ನಿರ್ಮಾಣದ ಮೊದಲ ಸಿನಿಮಾ. ‘ವೀರ ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ.

    ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply