Connect with us

    LATEST NEWS

    ಹಿರಿಯ ರಂಗಕರ್ಮಿ ಗುಡ್ಡದ ಭೂತ ಧಾರವಾಹಿ ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

    ಮಂಗಳೂರು, ಜುಲೈ 16: ಗುಡ್ಡದಭೂತ ಧಾರವಾಹಿ ನಿರ್ದೇಶಕ ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.


    ಮೂಲತಃ ದ.ಕ ಜಿಲ್ಲೆಯ ಮೂಲ್ಕಿಯವರಾದ ಸದಾನಂದ ಸುವರ್ಣ ಅವರು ಮುಂಬಯಿಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದವರು. ಕನ್ನಡ, ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವಿ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದ ಸದಾನಂದ ಸುವರ್ಣ, ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನೆಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ, ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟವರು.

    ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳಿಗೆ ಸದಾನಂದ ಸುವರ್ಣ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ‘ಗುಡ್ಡದ ಭೂತ’ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಖ್ಯಾತ ನಟ ಪ್ರಕಾಶ್ ರಾಜ್ ಅವರ ಕೆರಿಯರ್‌ಗೆ ಬ್ರೇಕ್ ಕೊಟ್ಟಿತು.  ನಾಟಕ ರಚನೆ, ನಟನೆ, ನಿರ್ದೇಶನದಲ್ಲಿ ಐದು ದಶಕಗಳ ಕಾಲ ಶ್ರಮಿಸಿದ ಅವರು, ಮುಂಬೈಯಲ್ಲಿ ಕನ್ನಡ ರಂಗಭೂಮಿಗೆ ಚೈತನ್ಯ ತುಂಬಿದರು. ಸಾಹಿತ್ಯದಲ್ಲೂ ಆಸಕ್ತಿ ಹೊಂದಿದ್ದ ಅವರು ಸಣ್ಣ ಕತೆ, ಕಾದಂಬರಿಗಳನ್ನು ಕೂಡ ಬರೆದಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *