LATEST NEWS
ಮಳೆಗೆ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ,9 ವಾಹನಗಳಿಗೆ ಹಾನಿ..!

ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.
ಮಂಗಳೂರು:ಮಂಗಳೂರು ಹೊರವಲಯದ ರಾ.ಹೆ.66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಲ್ಲಿ, ಬಸ್ಸ್, ನಾಲ್ಕು ಕಾರು, ಒಂದು ಲಾರಿ ಮತ್ತು ಆಟೋ ರಿಕ್ಷಾ, 2 ದ್ವಿಚಕ್ರವಾಹಗಳಿಗೆ ಹಾನಿಯಾಗಿವೆ.
ಅದೃಷ್ಟವಶತ್ ಯಾರಿಗೂ ದೊಡ್ಡ ಪ್ರಮಾಣದ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ನಿರಂತರವಾಗಿ ಸುರಿದ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಈ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸರಣಿ ಅಪಘಾತದಿಂದ ನೇತ್ರಾವತಿ ಸೇತುವೆ ಯುದ್ದಕ್ಕೂ ರಸ್ತೆ ಬ್ಲಾಕ್ ಆಗಿದ್ದು ವಾಹನ ಸವಾರರು ಪರದಾಟ ನಡೆಸಬೇಕಾಯಿತು.
ಮಾಹಿತಿ ಪಡೆದ ಸ್ಥಳಿಯ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಸಂಚಾರ ದಟ್ಟಣೆ ನಿವಾರಿಸಲು ಪ್ರಯತ್ನಿದರು.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.