LATEST NEWS
ಆಡಂಕುದ್ರು – ಥಾರ್ ಜೀಪ್ ಚಾಲಕನ ಧಾವಂತಕ್ಕೆ ಸರಣಿ ಅಪಘಾತ

ಮಂಗಳೂರು ಫೆಬ್ರವರಿ 13: ಜೀಪ್ ಚಾಲಕ ಕೇರಳ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಬೈಕ್ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಸಂಜೆ ವೇಳೆ ಸಂಭಾವಿಸಿದೆ.
ಅಪಘಾತದಲ್ಲಿ ಬೈಕ್ ಸವಾರರಿ ಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ, ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಗುದ್ದಿದ್ದಾನೆ. ಅಲ್ಲಿಂದ ಮತ್ತೆ ಎಡ ಭಾಗಕ್ಕೆ ತಿರುಗಿಸಿದ ಪರಿಣಾಮ ಸವಾರರಿಬ್ಬರು ತೆರಳುತ್ತಿದ್ದ ಬೈಕಿಗೆ ಜೀಪ್ ಡಿಕ್ಕಿ ಹೊಡೆದು ಬಳಿಕ ಕಂದಕಕ್ಕೆ ಉರುಳಿದೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಘಂಟೆಗಳ ಕಾಲ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
