FILM
ಖಿನ್ನತೆಗೆ ಒಳಗಾಗಿ ಕನ್ನಡದ ಕಿರುತೆರೆ ನಟಿ ನೇಣಿಗೆ ಶರಣು

ಬೆಂಗಳೂರು ಸೆಪ್ಟೆಂಬರ್ 30: ಕನ್ನಡದ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ಗೆಳೆಯನಿಗೆ ಊಟ ತರುವಂತೆ ಸವಿ ಮಾದಪ್ಪ ಹೇಳಿದ್ದರು. ಗೆಳೆಯ ಹೊರಗೆ ಹೋಗಿ, ಊಟ ತೆಗೆದುಕೊಂಡು ವಾಪಸ್ ಬರುವಷ್ಟರಲ್ಲಿ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಜನ್ಯ ಮೂಲತಃ ಕೊಡಗು ಜಿಲ್ಲೆಯ ಕುಶಾಲನಗರದವರಾಗಿದ್ದು, ಕನ್ನಡದ ಚೌಕಟ್ಟು, ಫನ್ ಎಂಬ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಸವಿ ಮಾದಪ್ಪ ನಾಲ್ಕು ಪುಟಗಳ ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ. ಡೆತ್ ನೋಟ್‌ನಲ್ಲಿ ‘’ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಕ್ಷಮಿಸಿಬಿಡಿ’’ ಎಂದು ತಂದೆ-ತಾಯಿಯಲ್ಲಿ ಸವಿ ಮಾದಪ್ಪ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.