Connect with us

FILM

25 ವರ್ಷದ ಧಾರವಾಹಿ ನಟ ಹೃದಯಾಘಾತದಿಂದ ನಿಧನ

Share Information

ಮಂಡ್ಯ ಅಗಸ್ಟ್ 18: ಹಿಂದಿ ಹಾಗೂ ತಮಿಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಮಂಡ್ಯ ಮೂಲದ ಪವನ್ ಹೃದಯಾಘಾತದಿಂದ ನಿಧನರಾಗಿದ್ದು, ಅವರಿಗೆ 25 ವರ್ಷ ವಯಸ್ಸಾಗಿತ್ತು.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿ‌ನ ಹರಿಹರಪುರ ಗ್ರಾಮದವರಾಗಿದ್ದು. ಅವರು ಹಿಂದಿ, ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ನಟಿಸುತ್ತಿದ್ದರು. ಸಿನಿಮಾಗಳಲ್ಲಿ ಅಭಿನಯಿಸಿ, ಬೆಳ್ಳಿತೆರೆಯಲ್ಲಿ ಮಿಂಚಬೇಕೆಂದು ಕನಸ್ಸು ಕಂಡಿದ್ದ ಪವನ್ ತಂದೆ ನಾಗರಾಜು ಹಾಗೂ ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು, ಗುರುವಾರ ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಹುಟ್ಟೂರಿನಲ್ಲಿ ಮೃತ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ. ಮಗನನ್ನು ಕಳೆದುಕೊಂಡು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.


Share Information
Advertisement
Click to comment

You must be logged in to post a comment Login

Leave a Reply