FILM
ಕಿರುತೆರೆ ನಟ ಕಿರಣ್ ರಾಜ್ ಗೆ ಅಪಘಾತ – ಎದೆ ಭಾಗಕ್ಕೆ ಪೆಟ್ಟು – ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಂಗಳೂರು ಸೆಪ್ಟೆಂಬರ್ 11: ಕನ್ನಡತಿ ಧಾರವಾಹಿ ಮೂಲಕ ಖ್ಯಾತಿ ಪಡೆದಿದ್ದ, ಕಿರುತೆರೆ ನಟ ಕಿರಣ್ ರಾಜ್ ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಿರಣ್ ರಾಜ್ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಪಾರಾಗಿದ್ದಾರೆ. ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಅಪಘಾತದ ಬಳಿಕ ಚೇತರಿಸಿಕೊಂಡಿರುವ ಕಿರಜ್ ರಾಜ್ ವಿಡಿಯೊ ಮೂಲಕ ತಮ್ಮ ಆರೋಗ್ಯದ ಮಾಹಿತಿ ಹಂಚಿಕೊಂಡಿದ್ದಾರೆ.
You must be logged in to post a comment Login